ಚಿಕ್ಕಮಗಳೂರು : ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕರ ಮಧ್ಯ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದ ಘಟನೆ ಚಿಕ್ಕಮಗಳೂರು ನಗರದ ತೊಗರಿಹಂಕಲ್ಲ ಸರ್ಕಲ್ ನಲ್ಲಿ ನಡೆದಿದೆ.
ರಸ್ತೆ ಮಧ್ಯೆ ಆಟೋ ನಿಲ್ಲಿಸಿದ್ದನ್ನು ಪ್ರಶ್ನಿಸಲು ಬಂದ ಬಸ್ ಕಂಡಕ್ಟರ್ , ಆಟೋ ಚಾಲಕರ ಜೊತೆ ಮಾತಿಗೆ ಮಾತು ಬೆಳೆಸಿದ್ದಾನೆ. ಈ ವೇಳೆ ಕಂಡಕ್ಟರ್ ಚಪ್ಪಲಿ ಕಾಲಲ್ಲಿ ಒದ್ದಿದ್ದಾನೆ ಎಂದು ಆಟೋ ಚಾಲಕರು ಆರೋಪಿಸಿದ್ದಾರೆ.
ಆದರೆ ಕಂಡಕ್ಟರ್ , ಪ್ರಶ್ನಿಸಲು ಹೋದ ತನ್ನ ಮೇಲೆ 4-5 ಆಟೋ ಚಾಲಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಚಿಕ್ಕಮಗಳೂರು ನಗರ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಸಂಬಂಧ ನಗರ ಠಾಣೆಗೆ ಕೆ.ಎಸ್.ಆರ್.ಟಿ.ಸಿ. ಕಂಡಕ್ಟರ್ ದೂರು ನೀಡಿದ್ದಾರೆ.