ಸಿದ್ದರಾಮಯ್ಯ ಪಂಚೆ ಪುರಾಣ

' @siddaramaiah ಅವರ ಪಂಚೆ ಆಕಸ್ಮಿಕವಾಗಿ ಕಳಚಿಬೀಳುವುದು ಸಹಜ, ಆದರೆ ಬಿಜೆಪಿ ನಾಯಕರು ತಮ್ಮ ಪ್ಯಾಂಟ್‌ನ್ನ ತಾವೇ ಕಳಚುವುದು ಅಸಹ್ಯ. ಕಳಚಿದ ನಂತರ ವಿಡಿಯೋ ಮಾಡಿಕೊಳ್ಳುವುದು, ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ ಮುಂದೆ ನಮ್ಮ ಸರ್ಕಾರದಲ್ಲಿ @BJP4Karnataka ನಾಯಕರಿಗೆ ಕಳಚಲಾಗದ 'ಪ್ಯಾಂಟ್ ಭಾಗ್ಯ' ನೀಡುವೆವು ಚಿಂತಿಸಬೇಡಿ!

Karnataka Congress @INCKarnataka Tweet

ವಿಧಾನಸಭೆಯಲ್ಲಿ ಮೈಸೂರು ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡುತ್ತಿದ್ದ ವೇಳೆ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಪಂಚೆ ಕಳಚಿ ಹೋಗಿತ್ತು. ಡಿಕೆಶಿ ಇದನ್ನು ಸಿದ್ದರಾಮಯ್ಯ ಕಿವಿಯಲ್ಲಿ ಉಸುರಿದ್ದರೂ ಸಹ ಸಿದ್ದರಾಮಯ್ಯ ಬಹಿರಂಗವಾಗಿಯೇ ಪಂಚೆ ಕಳಚಿದ ಬಗ್ಗೆ ಹೇಳಿಕೊಳ್ಳುವ ಮೂಲಕ ಪಂಚೆ ಪುರಾಣಕ್ಕೆ ಕಾಮಿಡಿ ಟಚ್ ನೀಡಿದ್ದರು.

ಆದರೆ ಬಿಜೆಪಿ ನಾಯಕರು ಸಾಕಷ್ಟು ಬಾರಿ ಸಿದ್ದರಾಮಯ್ಯರ ಪಂಚೆ ಕಳಚಿದ ಬಗ್ಗೆ ಅನೇಕ ಹೇಳಿಕೆಗಳನ್ನು ನೀಡುತ್ತಲೇ ಬರ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ಗಳ ಮೂಲಕ ಈ ವಿಚಾರವಾಗಿ ಟಾಂಗ್ ನೀಡಿದೆ.

ಪಂಚೆ ಈ ನೆಲದ ಸಂಸ್ಕೃತಿಯ ಪ್ರತೀಕ. ಶ್ರಮಜೀವಿಗಳ ಸಂಗಾತಿ, ಪಂಚೆ ಕಳಚುವುದು ಎತ್ತಿ ಕಟ್ಟುವುದು ಸಹಜ, ಅದೇ ಕರುನಾಡ ಮಣ್ಣಿನ ಮಕ್ಕಳ ಗತ್ತು. ಕಂಡ ಕಂಡಲ್ಲಿ ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮೊದಲು ತಮ್ಮ ಚಡ್ಡಿ ಲಾಡಿ ಸರಿಪಡಿಸಿಕೊಳ್ಳಿ ಎಂದು ಕರ್ನಾಟಕ ಕಾಂಗ್ರೆಸ್ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

 

 

ಇನ್ನೊಂದು ಟ್ವೀಟ್​ನಲ್ಲಿ ಸಿದ್ದರಾಮಯ್ಯರ ಪಂಚೆ ಆಕಸ್ಮಿಕವಾಗಿ ಕಳಚಿ ಬೀಳುವುದು ಸಹಜ.ಆದರೆ ಬಿಜೆಪಿ ನಾಯಕರು ತಮ್ಮ ಪ್ಯಾಂಟನ್ನು ತಾವೇ ಕಳಚುವುದು ಅಸಹ್ಯ. ಕಳಚಿದ ನಂತರ ವಿಡಿಯೋ ಮಾಡಿಕೊಳ್ಳುವುದು, ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ. ಮುಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರಿಗೆ ಕಳಚಲಾಗದ ಪಾಂಟ್​ ಭಾಗ್ಯ ನೀಡುವೆವು ಚಿಂತಿಸಬೇಡಿ..! ಎಂದು ಬರೆಯುವ ಮೂಲಕ ಭರ್ಜರಿ ಟಾಂಗ್​ ನೀಡಿದೆ.

Leave a Reply

Your email address will not be published. Required fields are marked *