ಶಿವಮೊಗ್ಗ; ಸೆಪ್ಟೆಂಬರ್ 28 ರಂದು ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರೊಂದು ಪತ್ತೆಯಾಗಿತ್ತು. ಆ ಕಾರಿನಲ್ಲಿ ಒಂದು ಅಸ್ಥಿ ಪಂಜರವೂ ಪತ್ತೆಯಾಗಿತ್ತು. ತನಿಖೆಯ ಆರಂಭ ಹಂತದಲ್ಲಿ ಅಪಘಾತದಲ್ಲಿ ಸುಟ್ಟು ಕರಕಲಾಗಿದ್ದ ಕಾರಿನಲ್ಲಿ ಸಿಲುಕಿದ್ದ ಚಾಲಕನೂ ಮೃತಪಟ್ಟದ್ದಾನೆ ಎನ್ನಲಾಗಿತ್ತು. ಆದರೆ, ತನಿಖೆಯ ನಂತರ ಇದೊಂದು ಕೊಲೆ ಪ್ರಕರಣ ಎಂಬುದು ಸಾಬೀತಾಗಿದೆ. ಅಲ್ಲದೆ, ಮೃತಪಟ್ಟ ವ್ಯಕ್ತಿಯನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಅಚ್ಚರಿಯ ವಿಚಾರವೆಂದರೆ ವಿನೋದ್ […]