ಮುಸ್ಲಿಂ ಅಬ್ಯರ್ಥಿಯಿಂದ ಬಿಜೆಪಿಗೆ ಲಾಭ ; ಸಿದ್ಧರಾಮಯ್ಯ ಟೀಕೆ

ಳೂರು: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದೆ. ಬಸವಕಲ್ಯಾಣದಲ್ಲೂ ಅದನ್ನೇ ಮಾಡಿದ್ರು. ಮುಸ್ಲಿಮರ ಬಗ್ಗೆ ಜೆಡಿಎಸ್‌ನವರಿಗೆ ಅಷ್ಟೊಂದು ಕಾಳಜಿ ಇದ್ರೆ, ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ? ಬಿಜೆಪಿಗೆ ಅನುಕೂಲ ಮಾಡಿಕೊಡಲು ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಈ ಹೇಳಿಕೆಗೆ ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನನಗೆ ಆರ್ಡರ್ ಮಾಡುವುದಕ್ಕೆ ಸಿದ್ದರಾಮಯ್ಯ ಯಾರು? ಎಲ್ಲಿ ಯಾವ ಅಭ್ಯರ್ಥಿ ಹಾಕಬೇಕೆಂದು ಇವರನ್ನ ಕೇಳಬೇಕಾ? ಇವರ ಮುಂದೆ ನಾನು ಅರ್ಜಿ ಹಿಡಿದುಕೊಂಡು ನಿಲ್ಲಬೇಕಾ? ನಮ್ಮ ಪಕ್ಷದ ವಿಚಾರಕ್ಕೆ ತಲೆ ಹಾಕುವುದಕ್ಕೆ ಅವರು ಯಾರು? ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ.  ಹೆಚ್.ಡಿ.ಕುಮಾರಸ್ವಾಮಿ ಸಿಂದಗಿ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಕ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ ಮಾಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಸಿಂದಗಿ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಕ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲಿ ಸಿದ್ದರಾಮಯ್ಯ ಚಕಾರವೆತ್ತಿ ಕುಮಾರ್ರಸ್ವಾಮಿಯನ್ನು ಪ್ರಶ್ನಿಸಿದ್ದಾರೆ

Share on facebook
Facebook
Share on google
Google+
Share on whatsapp
WhatsApp
Share on odnoklassniki
OK
Share on email
Email

Leave a Reply

Your email address will not be published. Required fields are marked *